ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನ ಉದ್ಘಾಟನಾ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಶುಕ್ರವಾರ ಮುಖಾಮುಖಿಯಾಗಲಿದೆ. ಸೌಥಾಂಪ್ಟನ್‍ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾಗಿಯಾಗುವ ಟೀಮ್ ಇಂಡಿಯಾದ ಸದಸ್ಯರು ಈ ಪಂದ್ಯಕ್ಕೂ ಮುನ್ನ ಗ್ರೂಫ್ ಫೆÇೀಟೋಗೆ ಫೆÇೀಸ್ ನೀಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಗ್ರೂಪ್ ಹಂತದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಅಗ್ರ ಸ್ಥಾನದೊಂದಿಗೆ ಫೈನಲ್ ಹಂತಕ್ಕೇರಿದರೆ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡ ಎರಡನೇ ಸ್ಥಾನಿಯಾಗಿ ಫೈನಲ್‍ಗೆ ಪ್ರವೇಶ ಪಡೆದುಕೊಂಡಿದೆ.
ಇನ್ನು ಟೀಮ್ ಇಂಡಿಯಾದ ಗ್ರೂಫ್ ಫೆÇೀಟೋವನ್ನು ನಾಯಕ ವಿರಾಟ್ ಕೊಹ್ಲಿ ಸಹಿತ ಟೀಮ್ ಇಂಡಿಯಾ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಟೀಮ್ ಇಂಡಿಯಾದ ಯುವ ಆಟಗಾರ ರಿಷಭ್ ಪಂತ್ ಕೂಡ ಈ ಫೆÇೀಟೋವನ್ನು ಹಂಚಿಕೊಂಡಿದ್ದಾರೆ. ಅತ್ಯುನ್ನತ ಟೆಸ್ಟ್‍ಗೆ ಸಿದ್ಧವಾಗಿz್ದÉೀವೆ ಎಂದು ಪಂತ್ ಬರೆದುಕೊಂಡಿದ್ದಾರೆ.
ಇನ್ನು ಇಂಗ್ಲೆಂಡ್ ತಂಡ ಈ ಮಹತ್ವದ ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿದೆ. ಈ ಸರಣಿಯನ್ನು ನ್ಯೂಜಿಲೆಂಡ್ 1-0 ಅಂತರದಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಭಾರತ ಕಳೆದ ಮಾರ್ಚ್ ತಿಂಗಳಿನಲ್ಲಿ ತವರಿನಲ್ಲಿ ಅಂತಿಮ ಟೆಸ್ಟ್ ಪಂದ್ಯವನ್ನು ಆಡಿದೆ.
ವಿರಾಟ್ ಕೊಹ್ಲಿ ಬಳಗ ಜೂನ್ 2ರಂದು ಇಂಗ್ಲೆಂಡ್‍ಗೆ ಆಗಮಿಸಿದ್ದು ಕ್ವಾರಂಟೈನ್ ಮುಗಿಸಿದ ಬಳಿಕ ಮೂರು ದಿನಗಳ ಇಂಟ್ರಾಸ್ಕ್ವಾಡ್ ಪಂದ್ಯವನ್ನು ಆಡಿತ್ತು. Wಖಿಅ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿರುವ ಭಾರತೀಯ ತಂಡ: ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಹನುಮ ವಿಹಾರಿ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್ ಮತ್ತು ವೃದ್ಧಿಮಾನ್ ಸಹಾ.