15.8 C
New York
Wednesday, March 22, 2023

Buy now

spot_img

₹3.45 ಕೋಟಿ ಅಭಿವೃಧ್ಧಿ ಕಾಮಗಾರಿ ಲೋಕಾರ್ಪಣೆ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಬೆಳವನೂರು, ತುರ್ಚಘಟ್ಟ, ಚಂದ್ರನಹಳ್ಳಿ ಹಾಗೂ ಹೊಸಬಿಸಲೇರಿ ಗ್ರಾಮಗಳಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ನಿರ್ಮಿಸಿರುವ 3.45 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಜಿ ಸಚಿವರೂ, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಇಂದು ಲೋಕಾರ್ಪಣೆಗೊಳಿಸಿದರು.
ಹೊಸಬೆಳವನೂರು ಗ್ರಾಮದ 12 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಡಾ|| ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ, 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಶು ಸಂಗೋಪನಾ ಆಸ್ಪತ್ರೆ, 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸೇವಾಲಾಲ್ ಸಮುದಾಯ ಭವನ ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎಪಿಎಂಸಿ ಗೋಡೌನ್, ತುರ್ಚಘಟ್ಟ ಗ್ರಾಮದಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಿಜಿಟಲ್ ಲೈಬ್ರರಿ ಮತ್ತು ವ್ಯಾಯಾಮಶಾಲೆ, 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಬಾಣದ ರಂಗನಾಥಸ್ವಾಮಿ, 31.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೈಸ್ಕೂಲ್ ಕೊಠಡಿ, 1ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎಪಿಎಂಸಿ ಗೋಡೌನ್, ಚಂದ್ರನಹಳ್ಳಿಯಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಹಾಗೂ ಹೊಸಬಿಸಲೇರಿ ಗ್ರಾಮದಲ್ಲಿ 21.20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳನ್ನು ಸಾರ್ವಜನಿಕರಿಗೆ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ಸಾಕಮ್ಮ ಗಂಗಾಧರನಾಯ್ಕ, ಎಪಿಎಂಸಿ ಉಪಾಧ್ಯಕ್ಷ ಬಿಸಲೇರಿ ಈರಣ್ಣ, ಸದಸ್ಯ ದೊಗ್ಗಳ್ಳಿ ಬಸವರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜಪ್ಪ, ಮೀನಾ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತುರ್ಚಘಟ್ಟದ ಬಸವರಾಜಪ್ಪ, ಬೆಳವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಕೆ.ಮಾಲತೇಶ್, ಉಪಾಧ್ಯಕ್ಷೆ ಶೃತಿ ನಾಗರಾಜ್, ಮತ್ತು ಸದಸ್ಯರುಗಳು, ಮುಖಂಡರುಗಳಾದ ತೆಂಗಿನಮರದ ಬಸವರಾಜಪ್ಪ, ಹನುಮಜ್ಜ, ಸತೀಶ್, ಕರಿಬಸಪ್ಪ, ರಿಯಾಜ್ ಅಹ್ಮದ್, ಅನ್ವರ್, ಬಸವನಗೌಡ್ರು, ಪಿಡಿಓಗಳಾದ ಲಕ್ಷ್ಮಿದೇವಿ ಮಂಜುನಾಥ್, ವಿವಿಧ ಇಲಾಖೆಯ ಅಧಿಕಾರಿಗಳಾದ ಮಲ್ಲಿಕಾರ್ಜುನಪ್ಪ, ಮಹಾದೇವಪ್ಪ, ಪ್ರಸಾದ್ ಪಿ., ಪ್ರಕಾಶ್ ನಾಯ್ಕ, ರವಿ, ಶಿವಕುಮಾರ್, ಪರಮೇಶ್ವರಪ್ಪ, ವೆಂಕಟೇಶ್, ವಿವಿಧ ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,745FollowersFollow
0SubscribersSubscribe
- Advertisement -spot_img

Latest Articles