ಬೆಳಗಾಯಿತು ವಾರ್ತೆ | Www.belagayithu.in
ಬೆಂಗಳೂರು: ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜ.28, 29ರಂದು ಚರ್ಚೆ ನಡೆಸಲು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಹಿನ್ನೆಲೆ ವಿಶೇಷ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ.





