300 ಮೀಟರ್ ರಾಷ್ಟ್ರಧ್ವಜದೊಂದಿಗೆ ದೇಶಭಕ್ತಿ ಮೆರವಣಿಗೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ದುರ್ಗಮ್ಮ ದೇವಸ್ಥಾನದಿಂದ ಸುಮಾರು 300 ಮೀಟರ್ ಉದ್ದದ ರಾಷ್ಟ್ರಧ್ವಜದೊಂದಿಗೆ ನಡೆದ ಭವ್ಯ ಮೆರವಣಿಗೆ ನಗರದಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಿಸಿತು. ಸಾವಿರಾರು ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ಹಿಡಿದು ಹೆಜ್ಜೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು.
ದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆಯು ರಾಯಲ್ ವೃತ್ತದ ಮೂಲಕ ಬೆಂಗಳೂರು ರಸ್ತೆಯಲ್ಲಿ ಸಾಗಿತು. ಮಾರ್ಗದುದ್ದಕ್ಕೂ ವಿದ್ಯಾರ್ಥಿಗಳು ದೇಶಭಕ್ತಿ ಘೋಷಣೆಗಳನ್ನು ಮೊಳಗಿಸುತ್ತಾ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುತ್ತಾ ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
ಸುಮಾರು 3,000 ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಮೆರವಣಿಗೆಗೆ ಮತ್ತಷ್ಟು ಕಳೆ ಬಂದಿತ್ತು.
ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಬೃಹತ್ ರಾಷ್ಟ್ರಧ್ವಜ ಜನರ ಗಮನ ಸೆಳೆಯಿತು. ಸಾರ್ವಜನಿಕರು ಮೆರವಣಿಗೆಯನ್ನು ವೀಕ್ಷಿಸಿ ವಿದ್ಯಾರ್ಥಿಗಳ ದೇಶಭಕ್ತಿ ಹಾಗೂ ಶಿಸ್ತಿನ ಮೆಚ್ಚುಗೆ ವ್ಯಕ್ತಪಡಿಸಿದರು.
ಮೆರವಣಿಗೆಯು ಮೋತಿ ವೃತ್ತದಲ್ಲಿ ಅಂತ್ಯಗೊಂಡಿತು. ರಾಷ್ಟ್ರಧ್ವಜದ ಗೌರವ, ದೇಶಪ್ರೇಮ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರಿದ ಈ ಮೆರವಣಿಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಮತ್ತಷ್ಟು ಬಲಪಡಿಸಿತು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles