ಬಾಗಲಕೋಟೆ : ಪ್ರವಾಸೋದ್ಯಮ ನೀತಿ ೨೦೨೦-೨೬ ಜಾರಿಗೆ ತರಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಗೆ ೫೦೦ ಕೋಟಿ ರೂಪಾಯಿಗಳನ್ನು ಕಾಯ್ದಿರಿಸಿದ್ದು, ಇದರಿಂದ ಹತ್ತು ಲಕ್ಷ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಸುವ ಸಾಧ್ಯತೆ ಇದೆ ಎಂದರು.
ಬಾದಾಮಿ, ಪಟ್ಟದಕಲ್ಲು, ಐಹೊಳೆ, ವಿಜಯಪುರ ಹಾಗೂ ಹಂಪಿಯಲ್ಲಿ ಸರ್ಕ್ಯೂಟ್ ಮಾಡಲಿದ್ದು, ಇದರಿಂದ ಈ ಭಾಗದಲ್ಲಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲಾಗುವುದು, ಬನಶಂಕರಿಯಲ್ಲಿ ನಿರ್ಮಾಣವಾಗುತ್ತಿರುವ ತ್ರಿಸ್ಟಾರ್ ಹೊಟೇಲ್ ಕಾಮಗಾರಿ ಬೇಗ ಪೂರ್ಣಗೊಂಡರೆ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.