7.3 C
New York
Monday, December 5, 2022

Buy now

spot_img

ಬಳ್ಳಾರಿಯ ಈ ನಾಲ್ಕು ಅದ್ಭುತಗಳಿಗೆ ವೋಟ್ ಮಾಡಿ, ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ

ಬಳ್ಳಾರಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಬಳ್ಳಾರಿಯ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.
ಬಳ್ಳಾರಿ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.
ಬಳ್ಳಾರಿಯ ನಾಮ ನಿರ್ದೇಶನಗಳು:
ಜಿಲ್ಲೆಯಲ್ಲಿ 4000 ವರ್ಷಗಳಷ್ಟು ಹಳೆಯದಾದ ಶಿಲಾಯುಗದ ಪುರಾತತ್ವ ಸ್ಥಳ ಮತ್ತು ವಿಶಿಷ್ಟ ವಸ್ತು ಸಂಗ್ರಹಾಲಯ ಸಂಗನಕಲ್ಲು, ಕರ್ನಾಟಕದ ಅತ್ಯಂತ ಪುರಾತನ ದೇಗುಲಗಳಲ್ಲಿ ಒಂದಾದ ಸಂಡೂರಿನ ಕುಮಾರಸ್ವಾಮಿ ದೇವಸ್ಥಾನ, ಏಷ್ಯಾದ ಅತಿ ದೊಡ್ಡ ಕರಡಿಧಾಮ ಎಂದೇ ಖ್ಯಾತಿ ಪಡೆದಿರುವ ದರೋಜಿ ಕರಡಿಧಾಮ, ಯಾಣವನ್ನು ಹೋಲುವ 180ಅಡಿ ಎತ್ತರದ ಏಕಶಿಲಾ ಪರ್ವತವಾದ ಉಬ್ಬಲಗಂಡಿಯ ಶಿಲಾಪರ್ವತಸ್ಥಳಗಳು ಈಗಾಗಲೇ ರಾಜ್ಯದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನಪಡೆದಿವೆ.

ಈಗಾಗಲೇ https://www.7wondersofkarnataka.com ನಲ್ಲಿ ನಾಮ ನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಬಳ್ಳಾರಿಯ ಈ ನಾಲ್ಕು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ಇವನ್ನು ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.
ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರ ಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು. ಹೀಗಾಗಿ ಬಳ್ಳಾರಿ ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು.ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.
ಏನಿದು ಅಭಿಯಾನ ?
ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್’ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.
‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು, ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈ ಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ ‘ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು’ ಎಂಬ ಈ ಅಭಿಯಾನ.
ಯಾವ ಹಂತದಲ್ಲಿದೆ ಅಭಿಯಾನ?
ಮೇ ತಿಂಗಳಲ್ಲಿ ಚಾಲನೆ ದೊರೆತಿರುವ ಆರು ಹಂತದ ಈ ಅಭಿಯಾನ ಎರಡನೇ ಹಂತಕ್ಕೆ ತಲುಪಿದೆ. ಮೊದಲ ಹಂತದಲ್ಲಿ ಸಾರ್ವಜನಿಕರು ವೆಬ್‌ಸೈಟ್ ಮೂಲಕ ತಮ್ಮ ನೆಚ್ಚಿನ ಊರು, ಜಿಲ್ಲೆ, ತಾಲೂಕು ಸೇರಿ ರಾಜ್ಯದ ಯಾವುದೇ ಜಾಗದಲ್ಲಿ ತಾವು ನೋಡಿದ ಅದ್ಭುತ ಪ್ರವಾಸೀ ಸ್ಥಳ, ಪಾರಂಪರಿಕ ತಾಣ, ಅತ್ಯಾಧುನಿಕ ಕಟ್ಟಡ, ರಸ್ತೆ ಹೀಗೆ ಅದ್ಭುತ ಎನಿಸುವ ಸ್ಥಳದ ಫೋಟೊ ಅಪ್‌ಲೋಡ್ ಮಾಡಿ ಆ ಸ್ಥಳದ ವೈಶಿಷ್ಟ್ಯವನ್ನು ದಾಖಲು ಮಾಡಿ ನಾಮನಿರ್ದೇಶನ ಮಾಡಿದ್ದಾರೆ.
ಇದೀಗ, ಎರಡನೇ ಹಂತದಲ್ಲಿ ಸಾರ್ವಜನಿಕರಿಂದ ನಾಮನಿರ್ದೇಶನಗೊಂಡ ಅದ್ಭುತಗಳಲ್ಲಿ 100 ಸ್ಥಳಗಳನ್ನು ಆಯ್ಕೆ ಮಾಡಿ, ಅತ್ಯದ್ಭುತ ತಾಣಗಳು ಯಾವುವು ಎಂಬ ಬಗ್ಗೆ ವೋಟಿಂಗ್ ನಡೆಯುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,593FollowersFollow
0SubscribersSubscribe
- Advertisement -spot_img

Latest Articles