ನವದೆಹಲಿ, – ದೇಶದಲ್ಲಿ ಕಳೆದ 24 ತಾಸಿನಲ್ಲಿ 43,733 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,06,64,218ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 930 ಮಂದಿ ಸಾವನ್ನಪ್ಪುವುದರೊಂದಿಗೆ ಈವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 4,04,211 ಕ್ಕೆ ಏರಿದೆ. ದೇಶಾದ್ಯಂತ ಸಕ್ರಿಯ ಪ್ರಕರಣಗಳು 4,437 ರಷ್ಟು ಇಳಿದು ಸದ್ಯ, 4,59,920ರಷ್ಟಿವೆ. ಇವು ಒಟ್ಟು ಪ್ರಕರಣಗಳ ಸಂಖ್ಯೆಯ ಶೇ 1.5 ರಷ್ಟಿವೆ. ಕಳೆದ 24 ಗಂಟೆಗಳಲ್ಲಿ 47,240 ಜನರು ಮಾರಣಾಂತಿಕ ವೈರಸ್‌ನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2,97,99,534 ಕ್ಕೆ ಏರಿದೆ. ಸದ್ಯ, ಚೇತರಿಕೆ ಪ್ರಮಾಣ ಶೇ 97.18ರಷ್ಟಿದ್ದು, ಸಾವಿನ ಪ್ರಮಾಣ ಶೇ 1.32 ರಷ್ಟಿದೆ.
ಈ ಮಧ್ಯೆ, ಮಂಗಳವಾರ ದೇಶಾದ್ಯಂತ 19,07,216 ಕೋವಿಡ್ ಮಾದರಿಗಳನ್ನು ಪರೀಕ್ಷಿಸುವುದರೊಂದಿಗೆ ಈವರೆಗೆ ಒಟ್ಟು 42,33,32,097 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಈವರೆಗೆ 36,13,23,548 ಜನರಿಗೆ ಕೋವಿಡ್ ಲಸಿಕೆ ಡೋಸ್ ಗಳನ್ನು ನೀಡಲಾಗಿದ್ದು, ಕಳೆದ 24 ಗಂಟೆಗಳಲ್ಲಿ 36,05,998 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.