ಬೆAಗಳೂರು: ಸ್ವಾತಂತ್ರೊö್ಯÃತ್ಸವದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ ೮೪ ಕೈದಿಗಳ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಜೈಲಲ್ಲಿ ಅಕ್ರಮಗಳ ಕುರಿತು ಇಂದು ಮಾತನಾಡಿದ ಅವರು, ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ. ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು ಸರಿಪಡಿಸುತ್ತೇವೆ. ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ ೧೫ ಸಿಬ್ಬಂದಿ ಅಮಾನತು ಮಾಡಲಾಗಿದೆ. ೩೦ ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಇವಾಗ ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ. ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ “ಫೋನ್, ನಿಷೇಧಿತ ವಸ್ತು ಬಳಕೆ ಮಾಡಿದರೆ ಎಫ್ ಐ ಆರ್ ಆಗುತ್ತಿದೆ. ಕೈದಿಗಳ ಶಿಕ್ಷೆ ಪ್ರಮಾಣ ಮುಗಿದ ಬಳಿಕ ಐದು ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ. ಸಿಬ್ಬಂದಿಯ ವಿರುದ್ಧವೂ ಎಫ್ ಐ ಆರ್ ದಾಖಲು ಮಾಡಲಾಗುತ್ತಿದೆ. ಈ ರೀತಿ ಬಿಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ೧ ಲಕ್ಷ ಪೊಲೀಸರ ಮನೆಯಲ್ಲಿ ರಾಷ್ಟç ಧ್ವಜ ಹಾರಾಡುತ್ತೆ. ಸ್ವಾತಂತ್ರೊö್ಯÃತ್ಸದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ ೮೪ ಕೈದಿಗಳ ಬಿಡುಗಡೆ ಮಾಡಲಾಗುತ್ತಿದೆ. ಪಿಎಸ್ಐ ಅಕ್ರಮದ ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಯಾವ ಒತ್ತಡ ಏನೂ ಇಲ್ಲ, ಗಂಭೀರವಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಿಐಡಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ ಎಂದರು.