ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ


ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ದೇಶದಲ್ಲಿ ಈಗಾಗಲೇ 14 ವರ್ಷಗಳ ಹಿಂದೆಯೇ ಪೋಲಿಯೊ ಮುಕ್ತ ಎಂದು ಘೋಷಣೆಯಾಗಿದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಸ್ಪತ್ರೆಯ ಮುಂಭಾಗದ ಎಮ್.ಸಿ.ಎಚ್ ಆಸ್ಪತ್ರೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಲಸಿಕೆ ಪಡೆದರೂ ಮಕ್ಕಳಿಗೆ ಯಾವುದೇ ಅಡ್ಡಪರಿಣಾಮ ಬೀರದೆ, ಅವರಲ್ಲಿ ರೋಗನಿರೋಧಕ ಶಕ್ತಿ ಮತ್ತಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಎಲ್ಲರೂ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಅಧಿಕಾರಿಗಳು ಮನವರಿಕೆ ಮಾಡಿಕೊಡಬೇಕು. ಮುಂಬರುವ ದಿನಗಳಲ್ಲಿಯೂ ನಗರವನ್ನು ಸಂಪೂರ್ಣ ಆರೋಗ್ಯಯುತವಾಗಿಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

1.99 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ರಾಷ್ಟ್ರೀಯ ಲಸಿಕಾ ದಿನಗಳ ಅಂಗವಾಗಿ ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1 ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಯಲಿದೆ. ಜಿಲ್ಲೆಯ ಒಟ್ಟು 16.74 ಲಕ್ಷ ಜನಸಂಖ್ಯೆಯ ವ್ಯಾಪ್ತಿಯಲ್ಲಿ 0 ರಿಂದ 5 ವರ್ಷದೊಳಗಿನ ಒಟ್ಟು 1,99,703 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ ಹೊಂದಲಾಗಿದೆ.
ಇದೇ ವೇಳೆ ಗಣ್ಯರು ಹುಟ್ಟಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಜೀವಹನಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷ ಹೆಚ್. ಲಕ್ಷ್ಮಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles