ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಶಾಸಕ ಭರತ್ ರೆಡ್ಡಿ

ಬೆಳಗಾಯಿತು ವಾರ್ತೆ Www.belagayithu.in
ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಶುಕ್ರವಾರ ಆಂಧ್ರ ಪ್ರದೇಶದ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮಠದಲ್ಲಿ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿದ ಅವರು, ರಾಜ್ಯದ ಹಾಗೂ ಬಳ್ಳಾರಿ ನಗರದ ಜನರ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಗುರುಗಳ ಆಶೀರ್ವಾದ ಪಡೆದರು.
ಬಳಿಕ ಮಾತನಾಡಿದ ಶಾಸಕ ನಾರಾ ಭರತ್ ರೆಡ್ಡಿ, ಜನರ ಅಭಿವೃದ್ಧಿ ಮತ್ತು ಕ್ಷೇತ್ರದ ಸಮಗ್ರ ಪ್ರಗತಿಗಾಗಿ ಕಾಂಗ್ರೆಸ್ ಪಕ್ಷ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಂತ್ರಾಲಯದ ಭೇಟಿ ತಮ್ಮಲ್ಲಿ ಮತ್ತಷ್ಟು ಆಧ್ಯಾತ್ಮಿಕ ಶಕ್ತಿ ಮತ್ತು ಸೇವಾ ಮನೋಭಾವವನ್ನು ವೃದ್ಧಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಕಟ್ಟೇಮನಿ ನಾಗೇಂದ್ರ, ಹಿರಿಯ ಕಾಂಗ್ರೆಸ್ ಮುಖಂಡರಾದ ಅಸುಂಡಿ ವಂದ್ರಿ, ಪರಶುರಾಮ್, ಹೊನ್ನಪ್ಪ, ಹಗರಿ ಗೋವಿಂದ್, ಗುಂತಕಲ್ ಸುರೇಶ್, ನಾಯ್ಡು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles