ಬೆಳಗಾಯಿತು ವಾರ್ತೆ
ಕೊಟ್ಟೂರು: ಕೊಟ್ಟೂರಿನ ಗಣ್ಯ ವ್ಯಕ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಎಂ.ಎಂ.ಜಿ. ಹರ್ಷವರ್ಧನ್ (64) ಅವರು ಬುಧವಾರ ನಿಧನರಾದರು.
ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸಹೋದರರು, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಆಪ್ತರು ಹಾಗೂ ಸಾರ್ವಜನಿಕರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಹರ್ಷವರ್ಧನ್ ಅವರ ಅಗಲಿಕೆಗೆ ಕೊಟ್ಟೂರಿನ ವಿವಿಧ ಕ್ಷೇತ್ರಗಳ ಗಣ್ಯರು, ಮುಖಂಡರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ





