ಬೆಳಗಾಯಿತು ವಾರ್ತೆ| Www.belagayithu.in
ಮಂಡ್ಯ: ಘನತ್ಯಾಜ್ಯ ಮತ್ತು ತ್ಯಾಜ್ಯ ನೀರಿನ ಸಂಗ್ರಹಣೆ, ನಿರ್ವಹಣೆ ಹಾಗೂ ಶುದ್ಧೀಕರಣ ವ್ಯವಸ್ಥೆಯ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ ಮಂಡ್ಯ ನಗರಸಭೆಯ ಅಧಿಕಾರಿಗಳ ತಂಡವು ಮಂಡ್ಯ ಜಿಲ್ಲೆಯ ಖಾಸಗಿ ಸಂಸ್ಥೆ ನಿರ್ವಹಿಸುತ್ತಿರುವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಭೇಟಿಯ ವೇಳೆ ತ್ಯಾಜ್ಯ ಸಂಗ್ರಹಣೆ, ವಿಂಗಡಣೆ, ವೈಜ್ಞಾನಿಕ ವಿಲೇವಾರಿ, ತ್ಯಾಜ್ಯ ನೀರಿನ ಶುದ್ಧೀಕರಣ ಪ್ರಕ್ರಿಯೆ ಹಾಗೂ ಘಟಕದಲ್ಲಿ ಅಳವಡಿಸಿರುವ ತಾಂತ್ರಿಕ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ಮಾಹಿತಿ ಪಡೆದುಕೊಂಡರು. ಘಟಕದ ಕಾರ್ಯನಿರ್ವಹಣೆಯನ್ನು ವೀಕ್ಷಿಸಿ, ತಮ್ಮ ನಗರಸಭೆಯಲ್ಲಿ ಅಳವಡಿಸಬಹುದಾದ ಉತ್ತಮ ಪದ್ಧತಿಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೇರಂ ವಿವೇಕ್ ಹಾಗೂ ವಿ. ಕುಬೇರ ಅವರು, ಘಟಕದ ವಿವಿಧ ವಿಭಾಗಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿದರು.
ನಗರಗಳ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಅತ್ಯಗತ್ಯವಾಗಿದ್ದು, ಈ ರೀತಿಯ ಅಧ್ಯಯನ ಭೇಟಿಗಳು ಉತ್ತಮ ಆಡಳಿತ ಮತ್ತು ಪರಿಣಾಮಕಾರಿ ತ್ಯಾಜ್ಯ ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಲಿವೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಬಳ್ಳಾರಿ ಪಾಲಿಕೆಯ ಮಹಾಪೌರರಾದ ಪಿ. ಗಾದಪ್ಪ ಸೇರಿದಂತೆ ಇತರರು ಹಾಜರಿದ್ದರು.





