ನಾಗೇಂದ್ರ ವಿರುದ್ಧ ಬಿಜೆಪಿ ಅಪಪ್ರಚಾರ: ವಾಲ್ಮೀಕಿ ಮುಖಂಡರ ಆರೋಪ


ಬೆಳಗಾಯಿತು ವಾರ್ತೆ
ಬಳ್ಳಾರಿ: ಸಚಿವ ಬಿ.ನಾಗೇಂದ್ರ ಅವರ ವಿರುದ್ಧ ಬಿಜೆಪಿ ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ನಡೆಸುತ್ತಿದೆ ಎಂದು ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಟ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಎರ್ರಗುಡಿ ಮುದಿ ಮಲ್ಲಯ್ಯ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಹಗರಣದ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯಲ್ಲಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ದೊರೆತಿರುವುದರಿಂದ ಅವರು ನಿರಪರಾಧಿ ಎಂಬುದು ಸ್ಪಷ್ಟವಾಗಿದೆ. ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಅಂತಿಮ ತೀರ್ಪು ನ್ಯಾಯಾಲಯದಿಂದಲೇ ಬರಬೇಕಾಗಿದೆ. ಆದರೆ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ದೂರಿದರು.
ನಾಗೇಂದ್ರ ಅವರು ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಎರಡು ಬಾರಿ ಸೋಲಿಸಿರುವುದನ್ನು ಬಿಜೆಪಿ ಸಹಿಸಿಕೊಳ್ಳಲಾಗದೆ ಅವರ ವಿರುದ್ಧ ಆರೋಪಗಳನ್ನು ಮಾಡುತ್ತಿದೆ. ರಾಜಕೀಯವಾಗಿ ಎದುರಿಸಲು ಸಾಧ್ಯವಾಗದವರು ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಅವರು ಟೀಕಿಸಿದರು.
ದಲಿತರು ಹಾಗೂ ವಾಲ್ಮೀಕಿ ಸಮುದಾಯದ ನಾಯಕರು ರಾಜಕೀಯವಾಗಿ ಬೆಳೆಯುತ್ತಿರುವುದನ್ನು ಬಿಜೆಪಿ ಸಹಿಸಿಕೊಳ್ಳುತ್ತಿಲ್ಲ. ಸುಳ್ಳು ಆರೋಪಗಳ ಬದಲು ವಾಸ್ತವಾಂಶಗಳ ಆಧಾರದಲ್ಲಿ ರಾಜಕೀಯ ಮಾಡಲಿ ಎಂದು ಮುಖಂಡರು ಆಗ್ರಹಿಸಿದರು.
ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.17ರಿಂದ ಬಿಜೆಪಿ ನಡೆಸಲಿರುವ ಅನಿರ್ದಿಷ್ಟಾವಧಿ ಧರಣಿಗೆ ಪ್ರತಿಕ್ರಿಯಿಸಿದ ಅವರು, ಕಾನೂನುಬದ್ಧ ಹಾಗೂ ಪ್ರಜಾಸತ್ತಾತ್ಮಕ ರೀತಿಯಲ್ಲಿ ಉತ್ತರ ನೀಡಲು ವಾಲ್ಮೀಕಿ ಸಮುದಾಯ ಸಿದ್ಧವಿದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಜಯಕುಮಾರ್, ಜಗನ್ನಾಥ್, ರಾಮಪ್ರಸಾದ್, ಸತ್ಯನಾರಾಯಣ, ಸೋಮಣ್ಣ, ಜಾನಕಿ ಸೇರಿದಂತೆ ಮುಖಂಡರು ಇದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles