ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಪ್ರಸ್ತಾವನೆಗೆ ರೈತ ಸಂಘ ವಿರೋಧ

ಬೆಳಗಾಯಿತು ವಾರ್ತೆ
ಬಳ್ಳಾರಿ: ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಯಾವುದೇ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ಕನ್ನಡ ನಾಡು ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮೆಣಸಿನ ಈಶ್ವರಪ್ಪ, ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ ವರ್ತಕರು ಹಾಗೂ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ. ಇದೀಗ ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಿದರೆ ವ್ಯಾಪಾರಿಗಳು, ಸಣ್ಣ ಉದ್ಯಮಿಗಳು ಹಾಗೂ ಸಾರ್ವಜನಿಕರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಬೀಳಲಿದೆ ಎಂದು ಹೇಳಿದರು.
ಯುಪಿಐ ವಹಿವಾಟಿಗೆ ಶುಲ್ಕ ವಿಧಿಸುವುದರಿಂದ ಡಿಜಿಟಲ್ ಹಣಕಾಸು ವ್ಯವಹಾರಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದ್ದು, ಸಣ್ಣ ವ್ಯಾಪಾರಿಗಳ ವಹಿವಾಟಿನ ಮೇಲೂ ಪರಿಣಾಮ ಬೀರಬಹುದು. ಬಡವರು, ಮಧ್ಯಮ ವರ್ಗದವರು ಹಾಗೂ ರೈತರ ಹಿತದೃಷ್ಟಿಯಿಂದ ಇಂತಹ ಯಾವುದೇ ಹೊಸ ಶುಲ್ಕ ಅಥವಾ ತೆರಿಗೆ ಜಾರಿಗೆ ತರುವ ಮುನ್ನ ಕೇಂದ್ರ ಸರ್ಕಾರ ಪುನರ್‌ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ MDR ಶುಲ್ಕ ವಿಧಿಸುವ ಪ್ರಸ್ತಾವನೆಗೆ ಕನ್ನಡ ನಾಡು ರೈತ ಸಂಘ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ. ಕೂಡಲೇ ಈ ಪ್ರಸ್ತಾವನೆಯನ್ನು ಹಿಂಪಡೆದು ಸಾರ್ವಜನಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲಿನ ಹೆಚ್ಚುವರಿ ಹೊರೆಯನ್ನು ತಪ್ಪಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಹೆಚ್. ಶ್ರೀನಿವಾಸರೆಡ್ಡಿ, ಮರೇಗೌಡ ಸಿ., ಬಿ. ಶರಣಪ್ಪ, ಹೆಚ್. ಎರಿಸ್ವಾಮಿಗೌಡ, ಬಿ. ರುದ್ರಗೌಡ, ಎನ್. ರಮೇಶ್, ಪಿ. ಮಂಜುನಾಥ, ಬಿ. ಈಶಣ್ಣ ಹಾಗೂ ಕಣ್ಣಿ ಶಿವಮೂರ್ತಿ ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles