ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಮತಯಾಚನೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಮತಯಾಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರನ್ನು ಭೇಟಿಯಾಗಿ ಅಭ್ಯರ್ಥಿಯ ಪರವಾಗಿ ಬೆಂಬಲ ನೀಡುವಂತೆ ಮನವಿ ಮಾಡಲಾಯಿತು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಶಿಕ್ಷಕರಲ್ಲಿ ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಬಳ್ಳಾರಿ ಜಿಲ್ಲಾ ವೀಕ್ಷಕರಾದ ಮಾನಯ್ಯ, ಅಖಿಲ್ ಅಹಮ್ಮದ್, ಸತೀಶ್ ಖಾಂಡ್ರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles