ಶಶಿಕಾಂತ್ ಗುರೂಜಿ ವಿರುದ್ಧ ಕಾನೂನು ಕ್ರಮಕ್ಕೆ ಬಿಜೆಪಿ ಮನವಿ

ಬೆಳಗಾಯಿತು ವಾರ್ತೆ
ಬಳ್ಳಾರಿ: ಹುಬ್ಬಳ್ಳಿಯಲ್ಲಿ ನಡೆದ ಕಬ್ಬು ಬೆಳೆಗಾರರ ರೈತ ಹೋರಾಟದ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಶಶಿಕಾಂತ್ ಗುರೂಜಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಕ್ಷದ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಎಸ್‌ಪಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಬಳ್ಳಾರಿ ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಟಿ. ದರಪ್ಪ ನಾಯಕ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ನಿನ್ನೆ ಬಳ್ಳಾರಿ ನಗರದ ಎಸ್‌ಪಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ಎಸ್‌ಪಿ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಹಾಗೂ ಈರಣ್ಣ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ರಾಮಕೃಷ್ಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶರಣು ಗೌಡ, ಜಿಲ್ಲಾ ಜನಜಾಗೃತಿ ವೇದಿಕೆ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ಮುಖಂಡ ಹೊನ್ನೂರು ಸ್ವಾಮಿ, ಎಸ್‌ಟಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಚಾಗನೂರು ಎರಿಸ್ವಾಮಿ, ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಹೇಮಂತ್ ರಾಜ್, ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಮಹೇಂದ್ರ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಮೀನ್, ಯುವ ಮೋರ್ಚಾ ಉಪಾಧ್ಯಕ್ಷ ವಿನೋದ್ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಿರೀಶ್ ಕಾರ್ನಾಡ್, ಯುವ ಮೋರ್ಚಾ ಉಪಾಧ್ಯಕ್ಷ ದೊಡ್ಡ ಬಸವ ಸಿಂಧಿಗೇರಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles