ಕ್ರಿಕೆಟ್ ತಾರೆ ಶ್ರೇಯಾಂಕಾ ಪಾಟೀಲ್‌ಗೆ ಮೇಯರ್ ಗದ್ದೆಪ್ಪ ಪೂಜಾರ್ ಅಭಿನಂದನೆ

ಬೆಳಗಾಯಿತು ವಾರ್ತೆ
ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರೆ ಹಾಗೂ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರನ್ನು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಗದ್ದೆಪ್ಪ ಪೂಜಾರ್ ಭೇಟಿಯಾಗಿ, ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ತಂಡದ ಅತ್ಯುತ್ತಮ ಪ್ರದರ್ಶನಕ್ಕಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮೇಯರ್ ಗದ್ದೆಪ್ಪ ಪೂಜಾರ್ ಅವರು ಬಳ್ಳಾರಿ ನಗರದಲ್ಲಿ ನಡೆಯುತ್ತಿರುವ ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಕುರಿತು ಶ್ರೇಯಾಂಕಾ ಪಾಟೀಲ್ ಅವರಿಗೆ ಮಾಹಿತಿ ನೀಡಿದರು. ಅಲ್ಲದೆ, ಬಳ್ಳಾರಿಯ ಕ್ರೀಡಾ ಮೂಲಸೌಕರ್ಯಗಳನ್ನು ವೀಕ್ಷಿಸಿ, ಸ್ಥಳೀಯ ಕ್ರೀಡಾ ಪ್ರತಿಭೆಗಳೊಂದಿಗೆ ಸಂವಾದ ನಡೆಸುವಂತೆ ಅವರನ್ನು ಆಹ್ವಾನಿಸಿದರು.
ಇದಕ್ಕೂ ಮುನ್ನ ಶ್ರೇಯಾಂಕಾ ಪಾಟೀಲ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸರ್ಕಾರದ ಹಿರಿಯ ಸಚಿವರು ಸನ್ಮಾನಿಸಿ ಅಭಿನಂದಿಸಿದ್ದರು.
ಈ ಸಂದರ್ಭದಲ್ಲಿ ಬಳ್ಳಾರಿಯ ಐತಿಹಾಸಿಕ ಕ್ರೀಡಾ ಸಂಸ್ಥೆಗಳ ಸ್ಥಾಪನೆ ಹಾಗೂ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಕೊಲಾಚಲಂ ಕುಟುಂಬದ ಪ್ರಸ್ತುತ ಕುಡಿಯಾದ ವೆಂಕಟ್ ನಾಗ್ ಕೊಲಾಚಲಂ ಅವರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles