ಬೆಳಗಾಯಿತು ವಾರ್ತೆ
ಬಳ್ಳಾರಿ: 18 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಬಳ್ಳಾರಿಯ ಸರ್ವೇಯರ್ ಹನುಮಂತಪ್ಪ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಸರ್ವೇ ಕಾರ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ₹18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹನುಮಂತಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.





