ಬೆಳಗಾಯಿತು ವಾರ್ತೆ
ಸಂಡೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸಂಡೂರು ತಾಲೂಕಿನ ಬರಪೀಡಿತ ಬಂಡ್ರಿ ಗ್ರಾಮಕ್ಕೆ ಭೇಟಿ ನೀಡಿ, ರೈತರು ಮೆಕ್ಕೆಜೋಳ ಬಿತ್ತನೆ ಮಾಡಿರುವ ಜಮೀನಿಗೆ ತೆರಳಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ವೇಳೆ ಜಮೀನಿನಲ್ಲಿ ರೈತರೊಂದಿಗೆ ಮುಕ್ತ ಸಂವಾದ ನಡೆಸಿದ ಡಿಸಿಎಂ ಪರಮೇಶ್ವರ ಅವರು, ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವು ಕೊರತೆ, ಉದ್ಯೋಗದ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ರೈತರು ಅವರ ಗಮನಕ್ಕೆ ತಂದರು.
ರೈತರ ಅಹವಾಲುಗಳನ್ನು ಆಲಿಸಿದ ಡಾ. ಜಿ. ಪರಮೇಶ್ವರ ಅವರು, ಸ್ಥಳೀಯ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು.




