ಬೆಳಗಾಯಿತು ವಾರ್ತೆ
ಬಳ್ಳಾರಿ: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಮೀಸಲಾಗಿರುವ ಸಿಂಧುವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯುವ ಮುಖಂಡ ಅರುಣ್ ಕುಮಾರ್ ವೈ. (ಅರುಣ್ ವಾಲ್ಮೀಕಿ) ಇಂಗಿತ ವ್ಯಕ್ತಪಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಯುವ ಕಾರ್ಯದರ್ಶಿ ಹಾಗೂ ಅಹಿಂದ ಗ್ರಾಮಾಂತರ ಅಧ್ಯಕ್ಷರಾಗಿರುವ ಅವರು, ಪಕ್ಷದ ಸಂಘಟನೆ ಮತ್ತು ಜನಸೇವೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಬಿ.ಕಾಂ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಶಾಸಕ ಬಿ. ನಾಗೇಂದ್ರ ಅವರ ಬೆಂಬಲ, ಮಾರ್ಗದರ್ಶನ ಮತ್ತು ಆಶೀರ್ವಾದದ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿರುವ ಅವರು, ಪಕ್ಷದ ಹಿರಿಯರು ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ, ಯುವಜನರ ಅವಕಾಶಗಳು ಹಾಗೂ ದೀನದಲಿತರ ಸಮಸ್ಯೆಗಳಿಗೆ ಸ್ಪಂದಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.





