ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಪದಾಧಿಕಾರಿಗಳ ಪದಗ್ರಹಣ, ಕಾರ್ಯಕಾರಿಣಿ ಸಭೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ನೂತನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅನಿಲ್ ಥಾಮಸ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ಮಾಜಿ ಸಂಸದ ಸಣ್ಣ ಫಕೀರಪ್ಪ, ರಾಜ್ಯ ಉಪಾಧ್ಯಕ್ಷ ಅಲ್ಲಭಕಾಶ ತಿಮ್ಮಾಪುರ, ನೂರು ಬಾಷ, ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಲ್ಲಭಕಾಶ, ರಾಜ್ಯ ಕಾರ್ಯದರ್ಶಿ ಕೆ.ಎಸ್. ದಿವಾಕರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿರಾಜ್ ಭಾಷಾ, ನಗರ ಅಲ್ಪಸಂಖ್ಯಾತರ ಮೋರ್ಚಾದ ರಂಜಾನ್ ಸಾಬ್ ಸೇರಿದಂತೆ ಮಹಿಳಾ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಮಂಡಲಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles