ಎಸ್‌ಐಆರ್ ಮೂಲಕ ಅಹಿಂದ ವರ್ಗಗಳ ಮತದಾರರ ಹೆಸರು ಕಡಿತ ಆರೋಪ: ಆಕ್ರೋಶ
ಬೆಳಗಾಯಿತು ವಾರ್ತೆ
ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಪಕ್ಷಗಳು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ‘ಸುಪ್ರೀಂಕೋರ್ಟ್ ಚಲೋ’ ಮತ್ತು ‘ದೆಹಲಿ ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವನ್ನು ಬಳಸಿಕೊಂಡು ಬಿಜೆಪಿ ಪಕ್ಷವು ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ಕರ್ನಾಟಕದಲ್ಲಿ ಅಹಿಂದ ವರ್ಗಗಳಿಗೆ ಸೇರಿದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕಡಿತಗೊಳಿಸಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮತದಾರರ ಹಕ್ಕುಗಳನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ಪ್ರಮುಖ ಕರ್ತವ್ಯವಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ವರ್ಗದ ಮತದಾರರಿಗೆ ಅನ್ಯಾಯವಾಗಬಾರದು ಎಂಬ ಆಗ್ರಹ ಪ್ರತಿಭಟನೆಯಲ್ಲಿ ವ್ಯಕ್ತವಾಯಿತು.





