ಗೆಹ್ಲೋಟ್ ಸ್ಥಾನಕ್ಕೆ ಸುಧಾ ಯಾದವ್; ಆರು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ
ಬೆಳಗಾಯಿತು ವಾರ್ತೆ
ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ.
ದೇಶದ ವಿವಿಧ ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತಮಿಳುನಾಡು, ಕೇರಳ, ಒಡಿಶಾ, ಸಿಕ್ಕಿಂ ಮತ್ತು ಉತ್ತರಾಖಂಡ ರಾಜ್ಯಗಳಿಗೂ ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.
ಈ ನೇಮಕಾತಿಗಳು ಸಂಬಂಧಪಟ್ಟವರು ತಮ್ಮ ಹುದ್ದೆಗಳ ಅಧಿಕಾರ ವಹಿಸಿಕೊಳ್ಳುವ ದಿನದಿಂದ ಜಾರಿಗೆ ಬರಲಿವೆ ಎಂದು ವರದಿಗಳು ತಿಳಿಸಿವೆ.





