ಪ್ರತಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆಗೆ ರೈತರ ಆಗ್ರಹ
ಬೆಳಗಾಯಿತು ವಾರ್ತೆ
ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಪ್ಲಾಜಾ ಬಂದ್ ಮಾಡಿ ಮಂಗಳವಾರ ತೀವ್ರ ಪ್ರತಿಭಟನೆ ನಡೆಸಿದರು.
ಬೆಳಗಾವಿ–ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಟೋಲ್ ಪ್ಲಾಜಾ ಬಂದ್ ಆಗಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.
ಕಬ್ಬು ಬೆಳೆಗಾರರು ಪ್ರತಿ ಟನ್‌ಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.





