ಪೌರಕಾರ್ಮಿಕರಿಗೆ ಬಟ್ಟೆ ವಿತರಣೆ


ಬೆಳಗಾಯಿತು ವಾರ್ತೆ
ಬಳ್ಳಾರಿ: ನವರಾತ್ರಿ ದಸರಾ ಹಬ್ಬದ ಪ್ರಯುಕ್ತ ನಗರದ ತಾಳೂರು ರಸ್ತೆಯಲ್ಲಿ 24ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರಾದ ಶ್ರೀನಿವಾಸ್ ಮೋತ್ಕರ್ ಅವರ ನೇತೃತ್ವದಲ್ಲಿ ಪೌರಕಾರ್ಮಿಕರಿಗೆ ಬಟ್ಟೆ ವಿತರಣೆ ಕಾರ್ಯಕ್ರಮವನ್ನು ಗುರುವಾರ ಆಯೋಜನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಅವರು, ನಗರದ ಸ್ವಚ್ಛತೆ ಕಾಪಾಡುವಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ರಕ್ಷಣೆಯಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಸೇವೆ ಸಮಾಜಕ್ಕೆ ಅಮೂಲ್ಯವಾದದ್ದು. ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಗೌರವಿಸುವ ಇಂತಹ ಮಾನವೀಯ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಅಭಿಪ್ರಾಯಪಟ್ಟರು.
ದಸರಾ ಹಬ್ಬದ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಬಟ್ಟೆ ವಿತರಿಸುವ ಮೂಲಕ ಅವರೊಂದಿಗೆ ಹಬ್ಬದ ಸಂತೋಷವನ್ನು ಹಂಚಿಕೊಳ್ಳುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles