ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಎಸ್.ಪಿ. ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಅವರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು, ಅಪಾರ ಜ್ಞಾನ ಹಾಗೂ ಸಮಾಜಕ್ಕೆ ಅವರು ನೀಡಿದ ಅಮೂಲ್ಯ ಸಂದೇಶಗಳನ್ನು ಸ್ಮರಿಸಿದರು. ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಚಿಂತನೆಗಳು ಸಮಾಜಕ್ಕೆ ಸದಾ ಪ್ರೇರಣೆಯಾಗಿವೆ ಎಂದು ಗೌರವ ಸಲ್ಲಿಸಿದರು.





