ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ; ಗುತ್ತಿಗೆದಾರರು ಹಾಗೂ ಆಡಳಿತ ಮಂಡಳಿಗೆ ಅಗತ್ಯ ಸೂಚನೆ
ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ತಾರಾನಾಥ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ಶಾಸಕ ನಾರಾ ಭರತ್ ರೆಡ್ಡಿ ಅವರು ಇಂದು ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಕಾಲೇಜು ಹಾಗೂ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಕಾಲೇಜಿನ ಆಡಳಿತ ಮಂಡಳಿಯವರೊಂದಿಗೆ ಚರ್ಚಿಸಿ, ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಗತ್ಯ ಸೂಚನೆಗಳನ್ನು ನೀಡಿದರು.
ಆಸ್ಪತ್ರೆ ಮತ್ತು ಕಾಲೇಜಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಲೋಪಗಳಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.





