ಪತ್ರಕರ್ತ ಎನ್.ವೀರಭದ್ರಗೌಡ ಅವರಿಗೆ ರಾಜ್ಯೋತ್ಸವ ಗೌರವ ಸನ್ಮಾನ


ಮಾಧ್ಯಮ ಕ್ಷೇತ್ರದ ಸಾಧನೆ ಗುರುತಿಸಿ ಸಚಿವ ಜಮೀರ್ ಅಹಮ್ಮದ್ ಅವರಿಂದ ಗೌರವ
ಬೆಳಗಾಯಿತು ವಾರ್ತೆ
ಬಳ್ಳಾರಿ:
ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಹಿರಿಯ ಪತ್ರಕರ್ತ, ಆಕಾಶವಾಣಿ ಮತ್ತು ದೂರದರ್ಶನ ವರದಿಗಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಎನ್. ವೀರಭದ್ರಗೌಡ ಅವರನ್ನು ರಾಜ್ಯೋತ್ಸವ ಗೌರವ ಸನ್ಮಾನ ನೀಡಿ ಗೌರವಿಸಲಾಯಿತು.

ಮಾಧ್ಯಮ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles