ನಗರ ಸಾರಿಗೆ ಬಸ್ ಬ್ರೇಕ್ ಫೇಲ್: ತಪ್ಪಿದ ಭಾರಿ ಅನಾಹುತ

ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪದ ರೇಣುಕಾ ಹೋಟೆಲ್ ಮುಂದೆ ನಗರ ಸಾರಿಗೆ ಬಸ್‌ನ ಬ್ರೇಕ್ ಫೇಲ್ ಆಗಿ ಸಂಭವಿಸಿದ ಅಪಘಾತದಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ನಡೆದಿದೆ.
ಬಸ್‌ನ ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಲವು ಬೈಕ್‌ಗಳ ಮೇಲೆ ಬಸ್ ಹರಿದಿದೆ. ಪರಿಣಾಮ ಬೈಕ್‌ಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಾರ್ವಜನಿಕರು ಹಾಗೂ ವಾಹನ ಸವಾರರು ಅಪಾಯದಿಂದ ಪಾರಾಗಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿರುವುದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನಗರದ ಪ್ರಮುಖ ಪ್ರದೇಶಗಳಲ್ಲಿ ಸಂಚರಿಸುವ ಬಸ್‌ಗಳ ನಿರ್ವಹಣೆ ಹಾಗೂ ಸುರಕ್ಷತಾ ಪರಿಶೀಲನೆಗೆ ಸಾರಿಗೆ ಇಲಾಖೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬಂದಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles