ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ಸಾರ್ವಜನಿಕ ಸ್ಥಳಗಳು, ಶಾಲಾ-ಕಾಲೇಜುಗಳ ಆವರಣ ಹಾಗೂ ಪ್ರಮುಖ ವೃತ್ತಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ 4,212 ವಾಹನ ಸವಾರರಿಗೆ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪನ್ನೇಕರ್ ಅವರು ತಿಳಿಸಿದ್ದಾರೆ.
ಹೆಲ್ಮೆಟ್ ಕಾರ್ಯಾಚರಣೆ:
ನಗರದಲ್ಲಿ ನವೆಂಬರ್ 1, 2026ರಿಂದ ಎರಡನೇ ಹಂತದ ಹೆಲ್ಮೆಟ್ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವ ಸವಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಕಾರ್ಯಾಚರಣೆಯಲ್ಲಿ ಒಟ್ಟು 5,139 ದ್ವಿಚಕ್ರ ವಾಹನಗಳನ್ನು ಪರಿಶೀಲಿಸಲಾಗಿದ್ದು, ಹೆಲ್ಮೆಟ್ ಧರಿಸದ 4,212 ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ಒಟ್ಟು ₹21,23,000 ದಂಡ ವಿಧಿಸಲಾಗಿದೆ. ಅಲ್ಲದೆ, 744 ಅಪ್ರಾಪ್ತ ಸವಾರರನ್ನು ಪತ್ತೆಹಚ್ಚಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರದ ವಿವಿಧ ಪ್ರಮುಖ ವೃತ್ತಗಳಲ್ಲಿ ವಾಹನ ಸವಾರರಿಗೆ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸುವುದರಿಂದ ಉಂಟಾಗುವ ಅಪಾಯಗಳ ಕುರಿತು ಜಾಗೃತಿ ಮೂಡಿಸಲಾಗಿದೆ. ಹೆಚ್ಚಿನ ಶಬ್ದ ಹೊರಸೂಸುವ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳನ್ನು ಪತ್ತೆಹಚ್ಚಿ, ಅಂತಹ ಸೈಲೆನ್ಸರ್‌ಗಳನ್ನು ತೆರವುಗೊಳಿಸುವ ಕ್ರಮವನ್ನೂ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.





