ವಾಲ್ಮೀಕಿಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಕಚೇರಿಯಲ್ಲಿ ಸೋಮವಾರ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರ ಅಧ್ಯಕ್ಷತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಅರ್ಪಿಸಲಾಯಿತು. ಬಳಿಕ ನಗರದ ಎಸ್.ಪಿ. ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಾಲ್ಮೀಕಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ:
ಕಾರ್ಯಕ್ರಮದಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ, ಮಹರ್ಷಿ ವಾಲ್ಮೀಕಿ ಅವರು ತಮ್ಮ ಜೀವನದಲ್ಲಿ ಪರಿವರ್ತನೆ ಹೊಂದಿ ಮಹಾನ್ ವ್ಯಕ್ತಿಯಾಗಿ ಬೆಳೆದವರು. ಅವರ ಜೀವನವು ಮನುಷ್ಯನಲ್ಲಿನ ಬದಲಾವಣೆ ಮತ್ತು ಉತ್ತಮ ಚಿಂತನೆಗಳ ಮಹತ್ವವನ್ನು ಸಾರುತ್ತದೆ. ಅವರು ರಚಿಸಿದ ರಾಮಾಯಣವು ಹಿಂದೂ ಧರ್ಮದ ಪವಿತ್ರ ಮಹಾಕಾವ್ಯವಾಗಿದ್ದು, ಸಮಾಜಕ್ಕೆ ಮೌಲ್ಯಯುತ ಸಂದೇಶಗಳನ್ನು ನೀಡಿದೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿ ಅವರ ತತ್ವಗಳು, ಚಿಂತನೆಗಳು ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ರಾಮಾಂಜಿನಿ, ಜಿಲ್ಲಾ ಕಾರ್ಯದರ್ಶಿ ಮಧುರೈ ವಿಜಯ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ, ಕಂಪ್ಲಿ ತಾಲೂಕು ಅಧ್ಯಕ್ಷ ಮೇಘರಾಜ್, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ರವಿಕುಮಾರ್, ಅಶೋಕ್ ಸಂಗನಕಲ್ಲು, ರಮೇಶ್, ಬಾಷಾ, ಕಿರಣ್ ಕುಮಾರ್, ಬಸವ ಹವಂಬಾವಿ, ಹೊನ್ನೂರು ಅಲಿ, ದಿವಾಕರ್, ಜಮೀಲಾ ಬೇಗಂ, ಶಬಾನಾ, ರೆಹಮತ್, ಸ್ವಾತಿ, ಲಕ್ಷ್ಮೀ, ಇಂದಿರಾ, ಶಮೀಮ್ ಬಾನು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles