ಬೆಂಗಳೂರು– ತಮ್ಮ ಮೇಲಿನ ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಕೈ ಮುಗಿದು ವಿನಂತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ತಮ್ಮ ಅಭಿಮಾನಿಗಳಿಗೆ ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ.
ತಮ್ಮ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೊಳಗಾಗಿರುವ ಗುಂಡ್ಲುಪೇಟೆ ತಾಲ್ಲೊಕಿನ ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ತಮಗೆ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದು ಯಡಿಯೂರಪ್ಪ ಹೇಳಿದ್ದಾರೆ.