ಬೆಳಗಾಯಿತು ವಾರ್ತೆ
ಬಳ್ಳಾರಿ: ಇದೇ ತಿಂಗಳು ೮ರಿಂದ ೧೬ರ ವರೆಗೆ ರಾಘವೇಂದ್ರ ಕಲಾ ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಕುರಿತು ವಿವೇಕ ತೋರಣ ಉಪನ್ಯಾಸ ಮಾಲಿಕೆ ಆಯೋಜನೆ ಮಾಡಲಾಗಿದೆ ಎಂದು ವಿವೇಕತೋರಣದ ಸಂಯೋಜಕ ಪ್ರಭುದೇವ ಕಪ್ಪಗಲ್ಲು ಅವರು ಹೇಳಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ತಮ್ಮ ಜೀವನದ ಉದ್ದಕ್ಕೂ ಸಮಾಜದ ಸುಧಾರಣೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟರು. ಇಂತಹ ಮಹಾನ್ ವ್ಯಕ್ತಿಯ ಜೀವನ ಮತ್ತು ಸಾಧನೆಯ ಕುರಿತು ಉಪನ್ಯಾಸ ಮಾಡಲು ಗದಗ ಮತ್ತು ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ಉಪನ್ಯಾಸ ನೀಡಿದ್ದಾರೆ. ಜತೆಗೆ ಪ್ರತಿ ದಿನ ಸಂಜೆ ಭಕ್ತಿ ಸಂಗೀತ ಕಾರ್ಯಕ್ರಮ, ಶಾಸ್ತ್ರೀಯ ಸಂಗೀತ, ಸಂಗಮ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿವೇಕತೋರಣದ ಅಧ್ಯಕ್ಷ ಡಾ. ಜಿ.ಆರ್ ವಸ್ತ್ರದ, ಸಂಚಾಲಕರಾದ ಸಿ. ಎರ್ರಿಸ್ವಾಮಿ ಹಾಜರಿದ್ದರು.