ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ನಮ್ಮ ಕ್ಲಿನಿಕ್ ಮಹಾನಂದಿಕೊಟ್ಟಂ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಗಾಂಧಿನಗರ ಇವರ ಸಂಯುಕ್ತ ಆಶ್ರಯದಲ್ಲಿ 23ನೇ ವಾರ್ಡ್ನ ನಾಗಪ್ಪ ಕಟ್ಟೆ ಸಮೀಪದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮಹಾ ಆರೋಗ್ಯ ತಪಾಸಣಾ ಶಿಬಿರಕ್ಕೆ ಪಾಲಿಕೆ ಮೇಯರ್ ಪಿ. ಗಾದೆಪ್ಪ ಚಾಲನೆ ನೀಡಿದರು.
ಶಿಬಿರವನ್ನು ಉದ್ಘಾಟಿಸಿದ ಮೇಯರ್ ಪಿ. ಗಾದೆಪ್ಪ ಅವರು ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಆರಂಭಿಕ ಹಂತದಲ್ಲಿಯೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಶಿಬಿರದಲ್ಲಿ ವಾರ್ಡ್ನ ನೂರಾರು ನಾಗರಿಕರು ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಂಡು ಶಿಬಿರದ ಸೌಲಭ್ಯವನ್ನು ಪಡೆದುಕೊಂಡರು. ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಾರ್ಡ್ನ ಮುಖಂಡರಾದ ಎಂ.ಡಿ. ವೆಂಕಮ್ಮ, ಲಕ್ಷ್ಮಣ ಹುಲಗಪ್ಪ, ವೆಂಕಟೇಶ್ ನಾಯಕ್, ಆಟೋ ನಾಗರಾಜ್ ಸೇರಿದಂತೆ ಹಲವು ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
ವಾರ್ಡ್ನ ನೂರಾರು ನಾಗರಿಕರು ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.





