30.1 C
Bellary
Thursday, April 18, 2024

Localpin

spot_img

ಸದೃಢ ಆರೋಗ್ಯಕ್ಕೆ ಪೌಷ್ಟಿಕಾಂಶ ಆಹಾರ ಅಗತ್ಯ

ಬಳ್ಳಾರಿ: ವಿದ್ಯಾರ್ಥಿಗಳು ಸದೃಢ ಆರೋಗ್ಯ ಹೊಂದಿದ್ದರೆ, ಉತ್ತಮ ಕಲಿಕಾ ಸಾಮಥ್ರ್ಯವುಳ್ಳ ಶಿಕ್ಷಣ ಪಡೆಯಲು ಸಾಧ್ಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳಲ್ಲಿ 9 ರಿಂದ 10 ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಅಡಿಯಲ್ಲಿ ನಗರದ ಬಾಪೂಜಿನಗರದ ಸರ್ಕಾರಿ ಪ್ರೌಢಶಾಲೆ ಶಾಲೆಯಲ್ಲಿ ಬೇಯಿಸಿದ ಮೊಟ್ಟೆ (ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ) ವಿತರಣೆ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಮತ್ತು ರಕ್ತಹೀನತೆ ನಿವಾರಿಸಲು ರಾಜ್ಯ ಸರ್ಕಾರವು ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲಾಗುತ್ತಿದೆ ಎಂದರು.
ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ, ಮಧ್ಯಾಹ್ನದ ಉಪಹಾರ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ನೀಡಲಾಗುತ್ತಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಿರುವ ಕಾರಣ, ಅಪೌಷ್ಟಿಕತೆ ಹೋಗಲಾಡಿಸಲು ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಿಸುವ ಕಾರ್ಯಕ್ರಮಕ್ಕೆ ರಾಜ್ಯಾದ್ಯಾಂತ ಇಂದು ಚಾಲನೆಗೊಂಡಿದೆ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಮಹಾನಗರ ಪಾಲಿಕೆ ಸದಸ್ಯೆ ಉಮಾದೇವಿ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಾಂಜಿನೇಯುಲು ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲೆಯ ಮುಖ್ಯಗುರುಗಳು, ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles