ಚಂಡೀಗಢ: ಹರಿಯಾಣದಲ್ಲಿ ಗಣಿಗಾರಿಕೆ ಮಾಫಿಯಾದ ತಂಡವನ್ನು ಸೆರೆಹಿಡಿಯುವ ಘಟನೆಯೊಂದರಲ್ಲಿ ತಡೆಯಲು ಬಂದ ಅಧಿಕಾರಿ ಮೇಲೆ ವಾಹನ ಹರಿಸಿದ್ದರಿಂದ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರೋ ಭಯಾನಕ ಘಟನೆ ವರದಿಯಾಗಿದೆ.
ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ ಕಲ್ಲುಗಳನ್ನು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ಶ್ರೇಣಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ಮಾಹಿತಿ ಪಡೆದಿದ್ದರು. ಇಂದು ಬೆಳಗ್ಗೆ ೧೧ ಗಂಟೆ ಸುಮಾರಿಗೆ ಪೊಲೀಸ್ ತಂಡದೊAದಿಗೆ ಸ್ಥಳಕ್ಕೆ ಬಂದಿದ್ದರು. ಪೊಲೀಸ್ ಸಿಬ್ಬಂದಿಯನ್ನು ಕಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಆರಂಭಿಸಿದರು. ಹಿರಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ದಾರಿಯಲ್ಲಿ ನಿಂತು ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಟ್ರಕ್‌ನ ಚಾಲಕ ಆತನ ಮೇಲೆ ಹರಿದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಪೊಲೀಸರು ಪಕ್ಕಕ್ಕೆ ಹಾರಿದ್ದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂತರ ಆರೋಪಿಗಳು ಪ್ರದೇಶದಿಂದ ಪರಾರಿಯಾಗಿದ್ದಾರೆ.