ಬೆಳಗಾಯಿತು ವಾರ್ತೆ
ಸಿರಗುಪ್ಪ: ಪಟ್ಟಣದ ವಿಶ್ವ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸೇರಿದ್ದ ಶಾಲಾ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್ ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ನಡೆದಿದೆ.
ಸೋಮವಾರ ಸಿರಗುಪ್ಪದಿಂದ ತೆಕ್ಕಲಕೋಟೆಗೆ ತೆರಳುತ್ತಿದ್ದಾಗ
ಈ ಘಟನೆ ನಡೆದಿದ್ದು, 50 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಸಮಯ ಪ್ರಜ್ಞೆ ಮೇರೆದ ಬಸ್ ಚಾಲಕ ಮಕ್ಕಳನ್ನು ಕೆಳಗೆ ಇಳಿಸಿದ್ದಾರೆ. ಬಸ್‌ಗೆ ಬೆಂಕಿ ಹತ್ತಿರುವ ಬಗ್ಗೆ ಯಾವುದೇ ಮಾಹಿತಿ ದೊರಕಿಲ್ಲ. ಸ್ಥಳಕ್ಕೆ ಸಿರಗುಪ್ಪ ಅಗ್ನಿ ಶಾಮಕದಳದ ಪೊಲೀಸರು ದಾವಿಸಿ ಬೆಂಕಿ ನಂದಿಸಿದ್ದಾರೆ.