ಹೊಸದಿಲ್ಲಿ: ದೇಶದ ಮುಂದಿನ ರಾಷ್ಟçಪತಿ ಆಯ್ಕೆಗೆ ಜುಲೈ ೧೮ ರಂದು ಮತದಾನ ನಡೆಯಲಿದ್ದು, ಜುಲೈ ೨೧ ರಂದು ನೂತನ ರಾಷ್ಟçಪತಿಯ ಹೆಸರನ್ನು ಪ್ರಕಟಿಸಲಾಗುತ್ತದೆ. ಒಂದೆಡೆ ಎನ್‌ಡಿಎ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿದರೆ, ಮತ್ತೊಂದೆಡೆ ಪ್ರತಿಪಕ್ಷಗಳು ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿ ಸೂಚಿಸಿವೆ. ಈಗ ಎಲ್ಲರ ಕಣ್ಣು ಮತದಾನದತ್ತ ನೆಟ್ಟಿದ್ದು, ಯಾವ ಪಕ್ಷ ಯಾರನ್ನು ಬೆಂಬಲಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ.
ಈ ಮಧ್ಯೆ, ರಾಷ್ಟçಪತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತದೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಶನಿವಾರ ಹೇಳಿದ್ದಾರೆ. ಆಮ್ ಆದ್ಮಿ ಪಾರ್ಟಿಯ ವಕ್ತಾರ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ಸಂಜನ್ ಸಿಂಗ್, “ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ ಆದರೆ ಯಶವಂತ್ ಸಿನ್ಹಾ ಅವರಿಗೆ ಮತ ಹಾಕುತ್ತೇವೆ” ಎಂದು ಹೇಳಿದ್ದಾರೆ.
ಈ ಬೆಳವಣಿಗೆ ಮಧ್ಯೆ ಕರ್ನಾಟಕದ ಪ್ರಮುಖ ಪಕ್ಷವಾಗಿರುವ ಜೆಡಿಎಸ್ ನಿನ್ನೆ, ರಾಷ್ಟçಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಘೋಷಣೆ ಮಾಡಿದೆ. ಮತ್ತೊಂದೆಡೆ ಮಹಾರಾಷ್ಟçದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಪ್ರಕಟಿಸಿದ್ದಾರೆ.