ಕಾರ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ನಗರದ ಅಲ್ಲಂ ಭವನದ ಬೈಪಾಸ್ ಸಮೀಪ ಕಾರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಮೃತರನ್ನು ಸೂರಿ ಎಂದು ಗುರುತಿಸಲಾಗಿದ್ದು, ಅವರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ಬಂದ ಕಾರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಕಾರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles