ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಿಂದ ಮೇವು ಬಣೆವೇಗಳು ಬೆಂಕಿಗಾಹುತಿಯಾಗಿದ್ದು, ಭಾರೀ ನಷ್ಟ ಉಂಟಾಗಿದೆ.
ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿ ಇಡಲಾಗಿದ್ದ ಸುಮಾರು 6 ರಿಂದ 7 ಮೇವು ಬಣೆವೇಗಳಿಗೆ ಏಕಾಏಕಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಅವು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿವೆ. ಈ ಅವಘಡದಲ್ಲಿ ಅಂದಾಜು 7 ರಿಂದ 8 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಗ್ನಿ ಅವಘಡ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸ್ಥಳೀಯರು ಬೆಂಕಿ ಕಾಣುತ್ತಿದ್ದಂತೆ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.





