29.8 C
Bellary
Thursday, April 24, 2025

Localpin

spot_img

ವಸ್ತು ಪ್ರದರ್ಶನ ಮಳಿಗೆಗೆ ಎಡಿಸಿ ಮೊಹಮ್ಮದ್ ಝುಬೇರ್ ಉದ್ಘಾಟನೆ

ಬೆಳಗಾಯಿತು ವಾರ್ತೆ |www.belagayithu.in

ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಏರ್ಪಡಿಸಿರುವ ಮೂರು ದಿನಗಳ (ಮಾ.08 ರಿಂದ 10 ರವರೆಗೆ) ವಸ್ತು ಪ್ರದರ್ಶನ ಮಳಿಗೆಯನ್ನು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಶುಕ್ರವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಯೋಜನೆಗಳ ಮಾಹಿತಿಯನ್ನು ವಸ್ತು ಪ್ರದರ್ಶನವು ಒಳಗೊಂಡಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರವು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಮತ್ತು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಹಾಕಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ ಎಂದರು.
ಮಳಿಗೆಯಲ್ಲಿ ಗ್ಯಾರಂಟಿ ಯೋಜನೆಗಳೂ ಸೇರಿದಂತೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಸೇರಿದಂತೆ  ಮಾಹಿತಿ ಒಳಗೊಂಡಿದೆ. ಈ ವಸ್ತು ಪ್ರದರ್ಶನ ವೀಕ್ಷಣೆಯು ಉಚಿತವಾಗಿರುತ್ತದೆ. ಬಸ್ ನಿಲ್ದಾಣಕ್ಕೆ ಬರುವ ಸಾರ್ವಜನಿಕರು, ಪ್ರಯಾಣಿಕರು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ವಸ್ತು ಪ್ರದರ್ಶನ ಮಳಿಗೆಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಹೇಳಿದರು.
ನುಡಿದಂತೆ ನಡೆದಿದ್ದೇವೆ ಸೆಲ್ಫಿ ಪಾಯಿಂಟ್
ಮಳಿಗೆಯಲ್ಲಿ ಗ್ಯಾರಂಟಿ ಯೋಜನೆಗಳು, ವಿವಿಧ ಕಾರ್ಯಕ್ರಮಗಳ ಕುರಿತು ಬೆಳಕು ವ್ಯವಸ್ಥೆಯ ಮಾಹಿತಿ ಫಲಕಗಳನ್ನು ಆಳವಡಿಲಾಗಿದ್ದು, ವಿಕ್ಷೀಸುವ ಸಾರ್ವಜನಿಕರಿಗೆ ಮಳಿಗೆಯ ಪಕ್ಕದಲ್ಲಿ ‘ನುಡಿದಂತೆ ನಡೆದಿದ್ದೇವೆ’ ಸೆಲ್ಫಿ ಪಾಯಿಂಟ್ ಹಾಕಲಾಗಿದೆ.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯಿಂದ ಪ್ರತಿ ಮಾಹೆಯಾನ ಹೊರತರುವ ಜನಪದ ಪುಸ್ತಕಗಳನ್ನು ವಿತರಿಸಲಾಯಿತು. ಸಾರ್ವಜನಿಕರು ವಸ್ತು ಮಳಿಗೆಯನ್ನು ವಿಕ್ಷೀಸಿ ಮಾಹಿತಿ ಪಡೆದುಕೊಂಡರು.
ಈ ವೇಳೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಇಲಾಖೆಯ ಸಿಬ್ಬಂದಿಗಳಾದ ವಿಜಯ್ ಕುಮಾರ್, ಹನುಮಂತಪ್ಪ, ಮಲ್ಲೇಶಪ್ಪ, ಶ್ರೀಧರ ಕವಾಲಿ, ಹನುಮೇಶ್, ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles