ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ಮಹಾನಗರ ಪಾಲಿಕೆಯ ಎಇಇ ವೀರೇಶ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ.
ಪಾಲಿಕೆ ಸದಸ್ಯ ಕುಬೇರ ಅವರ ಬಂಧನಕ್ಕೆ ಆಗ್ರಹಿಸಿ ಪಾಲಿಕೆ ಮುಂದೆ ಪೌರ ಕಾರ್ಮಿಕರು, ಪಾಲಿಕೆ ಸಿಬ್ಬಂದಿ ಹಾಗೂ ಸದಸ್ಯರು ನಿರಂತರವಾಗಿ ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಕ್ರಮ ಕೈಗೊಂಡು ಕುಬೇರ ಅವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.
ಶಾಸಕರು ಬಂಧನಕ್ಕೆ ಸೂಚನೆ ನೀಡಿದರೂ ಇದುವರೆಗೆ ಕುಬೇರ ಅವರನ್ನು ಬಂಧಿಸದಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಯನ್ನು ಬಂಧಿಸುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪಾಲಿಕೆ ಕಚೇರಿ ಮುಂದೆ ನಡೆದ ಪ್ರತಿಭಟನೆಗೆ ಹಲವರು ಬೆಂಬಲ ವ್ಯಕ್ತಪಡಿಸಿದ್ದು, ಪರಿಸ್ಥಿತಿ ತೀವ್ರವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.





