ಬಳ್ಳಾರಿ: ಡಿಪ್ಲೋಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಪರೀಕ್ಷೆ ಮಾಡುವಂತೆ ಎಐಡಿಎಸ್ ಒ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿ ನಂತರ ತಾಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಎಐಡಿಎಸ್ ಓ ನ ಜಿಲ್ಲಾಧ್ಯಕ್ಷ ಗುರಳ್ಳಿ ರಾಜು ಮಾತನಾಡಿ ಇಡೀ ರಾಜ್ಯದಾದ್ಯಂತ ಕಳೆದ ಒಂದು ತಿಂಗಳಿನಿಂದ ಡಿಫ್ಲೋಮೊ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹೋರಾಟ ನಡೆಸುತಿದ್ದಾರೆ. ಅಂತಿಮ ವರ್ಷದ ವಿದ್ಯಾರ್ಥಿಗಳ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ. ಇಂತಹ ಅಸಮಾನ್ಯ ಪರಿಸ್ಥಿತಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಮೂರು ಪರೀಕ್ಷೆಗಳನ್ನು ಅಕ್ಟೋಬರ್ ತಿಂಗಳೊಳಗೆ ಎದುರಿಸುವ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕಿಡಾಗಿದಾರೆ. ಹಾಗಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಕೂಡ ಸೂಕ್ತ ಪರಿಹಾರ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಮಂಡಳಿ ಸದಸ್ಯ ಸಿದ್ದು, ವಿದ್ಯಾರ್ಥಿಗಳಾದ ಸುಪ್ರೀತಾ,ಪವನ್, ಅಮೀತ್ ಸುರೇಶ್ ಹಾಜರಿದ್ದರು.