ಬೆಂಗಳೂರು, ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿದ್ದು, ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.
ಮಂಗಳವಾರ ಪಿಯುಸಿ ಫಲಿತಾಂಶಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ ಮಾತನಾಡಿದ ಅವರು, ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.