ಅಮರಾವತಿ ಆಂಧ್ರದ ಶಾಶ್ವತ ರಾಜಧಾನಿ

ಬೆಳಗಾಯಿತು ವಾರ್ತೆ| www.belagayithu.in
ನವದೆಹಲಿ: ಕೇಂದ್ರ ಸರ್ಕಾರವು ಆಂಧ್ರಪ್ರದೇಶ ಪುನರ್‌ರಚನೆ ತಿದ್ದುಪಡಿ ಮಸೂದೆ–2026 ಅನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಈ ಮೂಲಕ ಅಮರಾವತಿ ನಗರವನ್ನು ಆಂಧ್ರಪ್ರದೇಶ ರಾಜಧಾನಿಯಾಗಿ ಅಧಿಕೃತವಾಗಿ ಘೋಷಿಸಿದಂತಾಗಿದೆ.
ಅಮರಾವತಿಯನ್ನು ರಾಜ್ಯದ ರಾಜಧಾನಿಯಾಗಿ ಅಧಿಕೃತವಾಗಿ ಘೋಷಿಸಲು ನೆರವಾಗುವಂತೆ ಆಂಧ್ರಪ್ರದೇಶ ಪುನರ್‌ರಚನೆ ಕಾಯ್ದೆ–2014ಕ್ಕೆ ಸೂಕ್ತ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಮಾರ್ಚ್‌ 28ರಂದು ಅಂಗೀಕರಿಸಲಾಗಿತ್ತು.
2024ರ ಜೂನ್‌ 2ರಿಂದ ಪೂರ್ವಾನ್ವಯವಾಗುವಂತೆ ಅಮರಾವತಿ ನಗರವನ್ನು ಆಂಧ್ರಪ್ರದೇಶ ರಾಜಧಾನಿಯಾಗಿ ಪರಿಗಣಿಸಬೇಕು ಎಂಬ ಅವಕಾಶವನ್ನು ಕೂಡ ಈ ತಿದ್ದುಪಡಿ ಮಸೂದೆ ಒಳಗೊಂಡಿದೆ.
ಅಮರಾವತಿಯನ್ನು ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಿ ಘೋಷಿಸಲು ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಕೋರಿ ಮಾರ್ಚ್ 28ರಂದು ಆಂಧ್ರಪ್ರದೇಶ ವಿಧಾನಸಭೆ ಅಂಗೀಕರಿಸಿದ ನಿರ್ಣಯಕ್ಕೆ ಈ ಮಸೂದೆಯು ಅಧಿಕೃತ ರೂಪ ನೀಡಿದೆ’ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles