ಶಶೀಲ್ ಜಿ. ನಮೋಶಿ ಪರ ಅಮರನಾಥ ಪಾಟೀಲ ಪ್ರಚಾರ

ಬೆಳಗಾಯಿತು ವಾರ್ತೆ
ಬಳ್ಳಾರಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಬಳ್ಳಾರಿ ವಿಭಾಗದ ಪ್ರಭಾರಿ ಅಮರನಾಥ ಪಾಟೀಲ ಮಹಾಗಾಂವ ಅವರು ನಗರದ ಸರಳಾದೇವಿ ಕಾಲೇಜಿಗೆ ಭೇಟಿ ನೀಡಿ, ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರ ಪರವಾಗಿ ಮತಯಾಚಿಸಿದರು.
ಕಾಲೇಜಿನ ಪ್ರಾಧ್ಯಾಪಕರನ್ನು ಭೇಟಿ ಮಾಡಿದ ಅವರು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಾಮಾಂಜಿನಿ ಕೆ., ಅಲ್ಪಸಂಖ್ಯಾತರ ಜಿಲ್ಲಾ ಮೋರ್ಚಾದ ಪದಾಧಿಕಾರಿಗಳು, ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಾನ್, ಮಲ್ಲೇಶ್, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles