ನವದೆಹಲಿ: ಕೇಂದ್ರದ ಹೊಸ ಸೇನಾ ನೇಮಕಾತಿ ಯೋಜನೆಯಾದ ಅಗ್ನಿಪಥ್ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ, ಖ್ಯಾತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಹಿಂಸಾಚಾರದಿಂದ ಬೇಸರಗೊಂಡಿದ್ದು ಅಗ್ನಿವೀರರಿಗೆ ಆಫರ್ ನೀಡಿದ್ದಾರೆ. ಜೊತೆಗೆ ಅಗ್ನಿವೀರರ ಶಿಸ್ತು ಮತ್ತು ಕೌಶಲ್ಯಗಳು ಅವರನ್ನು ಉತ್ತಮ ಉದ್ಯೋಗಿಗಳಾಗಿ ಮಾಡುತ್ತವೆ ಎಂದು ಒತ್ತಿ ಹೇಳಿದ್ದಾರೆ.
ಅಗ್ನಿಪಥ್ ನೇಮಕಾತಿ ಯೋಜನೆ ವಿರೋಧಿಸಿ ನಡೆದ ಹಿಂಸಾಚಾರದಿಂದ ಬೇಸರವಾಗಿದೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ ಮತ್ತು ಪುನರಾವರ್ತಿಸುತ್ತೇನೆ.ಅಗ್ನಿವೀರರು ಪಡೆದ ಶಿಸ್ತು ಮತ್ತು ಕೌಶಲ್ಯಗಳು ಅವರನ್ನು ಅತ್ಯುತ್ತಮ ಉದ್ಯೋಗಕ್ಕೆ ಒಳಪಡಿಸುತ್ತದೆ. ಅಂತಹ ತರಬೇತಿ ಪಡೆದ, ಸಮರ್ಥ ಯುವಕರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ ಎಂದು ಆನಂದ್ ಮಹೀಂದ್ರ ಹೇಳಿದ್ದಾರೆ.