25.7 C
Bellary
Thursday, June 20, 2024

Localpin

spot_img

ಬಳ್ಳಾರಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಮೋಕ

ಬಳ್ಳಾರಿ: ಬಳ್ಳಾರಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅನಿಲ್ ಮೋಕ ಅವರು ನೇಮಕಗೊಂಡಿದ್ದಾರೆ. ಕಳೆದ ಸುಮಾರು ತಿಂಗಳಿಂದ ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರ ನೇಮಕ ಕುರಿತು ನಡೆಯುತ್ತಿದ್ದ ಚರ್ಚೆಗೆ ತೆರೆಬಿದ್ದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಮಕರ ಸಂಕ್ರಾಂತಿ ಹಬ್ಬದ ದಿನದಂದು, ಅನಿಲ ನಾಯ್ಡು ಮೊಕ ಅವರನ್ನು ನೇಮಕ ಮಾಡಿ ಆದೇಶ ನೀಡಿದ್ದಾರೆ.

ಎಂ ಎ ಎಲ್ ಎಲ್ ಬಿ ಪದವಿಧರರಾದ ಇವರು, ಕಳೆದ 2006 ರಲ್ಲಿ ಎಬಿವಿಪಿ ಯ ಪೂರ್ಣ ಅವಧಿ ಕಾರ್ಯಕರ್ತರಾಗಿದ್ದಾರೆ. ಹಂಪಿ ಉಳಿಸಿ ಆಂದೋಲನ ಸಮಿತಿಯ ಸಂಚಾಲಕರಾಗಿ, ಹಿಂದೂ ಜಾಗರಣ ವೇದಿಕೆಯ ಉತ್ತರ ಪ್ರಾಂತ ಕಾರ್ಯದರ್ಶಿ, 7 ವರ್ಷಗಳ ಕಾಲ ಬಿಜೆಪಿ ಜಿಲ್ಲಾ ಹಾಗೂ ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ.

ಕಳೆದ 4ವರ್ಷದಿಂದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಜಿ ಶಾಸರಾದ ಜಿ.ಸೋಮಶೇಖರ್ ರೆಡ್ಡಿ ಹಾಗೂ ಎಮ್ಮೆಲ್ಸಿ ವೈ. ಎಂ. ಸತೀಶ್ ಅವರ ಹೆಸರು ಕೇಳಿ ಬಂದಿತ್ತು.

ಆದರೆ, ಸಂಕ್ರಾಂತಿ ಹಬ್ಬದ ವಿಶೇಷ ಎಂಬಂತೆ ಬಳ್ಳಾರಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿ ಸಿಹಿ ಸುದ್ದಿ ನೀಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles