ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಅನಿಲ್ ಲಾಡ್ ಅವರು ಕಾಂಗ್ರೆಸ್ ಪಕ್ಷ ತೊರೆದು
ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳವಾರ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಅನಿಲ್ ಲಾಡ್ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ.
ಜೆಡಿಎಸ್‌ನಿಂದ ಅನಿಲ್ ಲಾಡ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಳ್ಳಾರಿ ನಗರ ಜೆಡಿಎಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸುವ ಸಾದ್ಯತೆ ಇದೆ ಎಂದು ಬಲ್ಲ ಮೂಲಗಳು ತಿಳಿಸಿದೆ.