3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆ

ಬೆಳಗಾಯಿತು ವಾರ್ತೆ |Www.belagayithu.in
ನವದೆಹಲಿ: ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ)ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸಂಸದರಾಗಿ ಆಯ್ಕೆಯಾಗಿರುವ ಹೆಚ್​ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿದ್ದರೆ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ (ಹಾವೇರಿ ಜಿಲ್ಲೆ) ವಿಧಾನಸಭಾ ಕ್ಷೇತ್ರ ತೆರವಾಗಿದೆ. ಇನ್ನು ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಇದೀಗ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ.
ಅಕ್ಟೋಬರ್​ ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ
ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟ
ಅಕ್ಟೋಬರ್ 25ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ಅಕ್ಟೋಬರ್​ 28ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
ಸಂಡೂರು ವಿಧಾನಸಭಾ ಕ್ಷೇತ್ರದ ವಿವರ
ಸಂಡೂರು ವಿಧಾನಸಭಾ ಕ್ಷೇತ್ರ ಎಸ್ಟಿ ಮೀಸಲು ಕ್ಷೇತ್ರವಾಗಿದ್ದು, 2023 ಚುನಾವಣೆಯಲ್ಲಿ ಕಾಂಗ್ರೆಸ್​ನ ಈ ತುಕರಾಂ ಗೆಲುವು ಸಾಧಿಸಿದ್ದರು. ಇನ್ನು ಈ ಕ್ಷೇತ್ರದಲ್ಲಿ ಒಟ್ಟು 221753 ಮತದಾರರು ಇದ್ದು, ಈ ಪೈಕಿ 111109 ಪುರುಷರು, 110618 ಮಹಿಳಾ ಮತದಾರರು ಇದ್ದಾರೆ. ಇನ್ನು ಇತರರು 32.
ಇನ್ನು ಜಾತಿವಾರು ಮತದಾರರ ಲೆಕ್ಕಾಚಾರ ನೋಡುವುದಾರೆ, ಎಸ್​.ಟಿ :  65,000, ಲಿಂಗಾಯಿತರು  : 35,000, ಕುರುಬರು : 30,000, ಮುಸ್ಲಿಂ : 10,000 , ಎಸ್.ಸಿ ( ಎಲ್ಲ ವರ್ಗ ಸೇರಿ)  40,000, ಇತರೆ : 40,000 ( ಬ್ರಾಹ್ಮಣ, ಶೆಟ್ಟಿ, ಕಮ್ಮ, ಬಲಿಜ ಸಣ್ಣಪುಟ್ಟ ಜಾತಿಗಳು )

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles